ಉಳ್ಳಾಲ : ಹಿಟ್ ಆಂಡ್ ರನ್ ಪ್ರಕರಣ – ಬೈಕ್ ಸವಾರನಿಗೆ ಗಂಭೀರ ಗಾಯ

ಉಳ್ಳಾಲ: ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ರಾ.ಹೆ 66ರ ಸಂಕೊಳಿಗೆ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.
ಘಟನೆಯಿಂದ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಘಟನೆಗೆ ಕಾರಣವಾದ ಕೇರಳ ನೋಂದಾಯಿತ ಇನೋವಾ ಕಾರಿನ ದಾಖಲೆಯನ್ನು ಸಿಸಿಟಿವಿ ಮೂಲಕ ಪತ್ತೆಹಚ್ಚಲಾಗಿದೆ.
ಕೋಟೆಕಾರು ವೈದ್ಯನಾಥ ದೇವಸ್ಥಾನ ರಸ್ತೆ ನಿವಾಸಿ ತೇಜಸ್ ರಾಮ ಕುಲಾಲ್ (28) ಗಾಯಾಳು. ಕೋಟೆಕಾರಿನ ಮನೆ ಕಡೆಗೆ ಬರುವ ಸಂದರ್ಭ ಕೇರಳ ಕಡೆಗೆ ತೆರಳುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿತ್ತು.
ಗಂಭೀರ ಗಾಯಗೊಂಡ ತೇಜಸ್ ಅವರನ್ನು ತಕ್ಷಣ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ತನಿಖೆ ನಡೆಸಿ, ತಲಪಾಡಿ ಟೋಲ್ ಗೇಟ್ ನ ಸಿಸಿಟಿವಿ ಪರಿಶೀಲಿಸಿದಾಗ ಕೇರಳ ನೋಂದಾಯಿತ ಇನೋವಾ ಕಾರು ಘಟನೆಗೆ ಕಾರಣವಾಗಿರುವುದನ್ನು ಪತ್ತೆಹಚ್ಚಿದ್ದಾರೆ.
