ಉಳ್ಳಾಲ : 24 ಪುಟಗಳ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ
ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು 24 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ.
ಮೂಲತ: ಫರಂಗಿಪೇಟೆಯ ನಿವಾಸಿಯಾಗಿರುವ ಅಶ್ವಿನಿ ಬಂಗೇರ ಅವರು, ಸದ್ಯ ಕುಂಪಲ ಚಿತ್ರಾಂಜಲಿ ನಗರದಲ್ಲಿ ಮನೆ ಖರೀದಿಸಿದ್ದು, ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮ ಹತ್ಯೆಗೆ ಶರಣಾಗಿದ್ದಾಳೆ. ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟ್‍ಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆ.
ಸಾಮಾನ್ಯ ಕುಟುಂಬದವರಾಗಿರುವ ಅಶ್ವಿನಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತ ಎಂಬವರಿಂದ ಅಶ್ವಿನಿಯೆ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.ಮೃತ ದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.