ಉಳ್ಳಾಲ – ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ : ಮಾಜಿ ಸಚಿವ ಈಶ್ವರಪ್ಪ ಹೇಳಿಕೆ

ಉಳ್ಳಾಲ ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಗೆಲ್ಲಿಸಿ ಅಬ್ಬಕ್ಕನ ಭವನ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಮಾಜಿ ಸಚಿವ ಈಶ್ವರಪ್ಪ ಅಭಿಪ್ರಾಯಪಟ್ಡರು. ಮಂಗಳೂರು ವಿಧಾನ ಸಭಾ ಕ್ಷೇತ್ರದ ಕುತ್ತಾರು ರಾಜರಾಜೇಶ್ವರೀ ಸಿದ್ದಿವಿನಾಯಕ ದೇವಸ್ಥಾನದಿಂದ ತೊಕ್ಕುಟ್ಟು ಜಂಕ್ಷನ್‍ವರೆಗೆ ನಡೆದ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಉಳ್ಳಾಲ ಕ್ಷೇತ್ರದಲ್ಲಿ ಅಬ್ಬಕ್ಕ ಭವನ ನಿರ್ಮಾಣಕ್ಕೆ ಬಿಜೆಪಿ ಸರಕಾರ ಅನುದಾನ ಬಿಡುಗಡೆ ಮಾಡಿತ್ತು. ಆದರೆ ಸ್ಥಳೀಯ ಶಾಸಕ ಯು.ಟಿ. ಖಾದರ್ ಭವನ ನಿರ್ಮಾಣಕ್ಜೆ ಸಂಬಂಧಿಸಿದಂತೆ ಯಾವುದೇ ಪ್ರಯತ್ನ ಪಟ್ಟಿಲ್ಲ ಇಲ್ಲಿನ ಜನತೆ ಬಿಜೆಪಿಯನ್ಬು ಗೆಲ್ಲಿಸಿ ನಿಮ್ಮ ಸಮಸ್ಯೆ ಬಗೆಹರಿಸಲು ಬಿಜೆಪಿ ಸಿದ್ದವಿದೆ ಎಂದರು.

ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ದತ್ತಾತ್ರೇಯ, ಕಿಶೋರ್ ಉಡುಪಿ, ಬಿಜೆಪಿ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಸತೀಶ್ ಕುಂಪಲ, ಚಂದ್ರಶೇಖರ್ ಉಚ್ಚಿಲ್, ಚಂದ್ರಹಾಸ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು

Related Posts

Leave a Reply

Your email address will not be published.