ಉಪ್ಪಿನಂಗಡಿ: ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ನಿಧನ
ಮುಂಬೈ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆಕ್ಕಡಿ, ಸಂಯುಕ್ತ ಕರ್ನಾಟಕ ಪುತ್ತೂರು ತಾಲೂಕು ವರದಿಗಾರ ಮೇಘ ಪಾಲೆತ್ತಡಿ ಸಹೋದರ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ಹೃದಯಾಘಾತದಿಂದ ನಿಧನ.
ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಅ.26 ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು.
ಮೃತ ರಾಮಣ್ಯಗೌಡರವರು ಪತ್ನಿ ಚಂದ್ರಾವತಿ, ಪುತ್ರಿಯರಾದ ಶಶಿಕಲಾ, ಚೈತ್ರ, ಪುತ್ರರಾದ ಧನಂಜಯ, ಲೋಕೇಶ್ ಹಾಗೂ ಸಹೋದರಾರದ ಮುಂಬೈ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆಕ್ಕಡಿ, ಸಂಯುಕ್ತ ಕರ್ನಾಟಕ ಪುತ್ತೂರು ತಾಲೂಕು ವರದಿಗಾರ ಮೇಘ ಪಾಲೆತ್ತಡಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ನಿನ್ನೆ ರಾತ್ರಿ ಮನೆಯ ಜಾಗದಲ್ಲೇ ಮೃತರ ಅಂತ್ಯಸಂಸ್ಕಾರ ನಡೆಯಿತು.