ಉಪ್ಪುಂದ ಕರ್ಕಿಕಳಿ ದೋಣಿ ದುರಂತ ಪ್ರಕರಣ : ಘಟನಾ ಸ್ಥಳಕ್ಕೆ ಮೀನುಗಾರಿಕ ಸಚಿವರು, ಶಾಸಕರು ಭೇಟಿ
ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಾಂತ್ವಾನ ಹೇಳಿದರು.
ಸಚಿವ ಮಾಂಕಾಳ ವೈದ್ಯ ಮಾತನಾಡಿ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ ಲಕ್ಷ 6 ಹಸ್ತಾಂತರಿಸಲಾಗುತ್ತಿದೆ. ಕೊಡೇರಿ ಬಂದರಿನ ಎರಡು ಬದಿಯಲ್ಲಿ 250 ಮೀಟರ್ ಬ್ರೇಕ್ ವಾಟರ್ ವಿಸ್ತರಿಸುವ ಬಗ್ಗೆ ಶಾಸಕರು ಹಾಗೂ ಮಾಜಿ ಶಾಸಕರು ಬೇಡಿಕೆ ಇರಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾಮಗಾರಿ ಅನುಷ್ಠಾನಗೊಳಿಸುವ ಬಗ್ಗೆ ಕ್ರಮವಹಿಸಲಾಗುವುದು ಎಂದರು.
ಕರ್ಕಿಕಳಿಯಲ್ಲಿ ಸಮುದ್ರದಲೆಗಳ ಹೊಡೆತಕ್ಕೆ ದೋಣಿ ಮಗುಚಿ ಬಿದ್ದು ನಾಗೇಶ್ ಬಾಬು ಖಾರ್ವಿ ಎಂಬುವವರನ್ನು ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಸತೀಶ್ ಖಾರ್ವಿ ಎಂಬುವವರು ನಾಪತ್ತೆಯಾಗಿದ್ದು ನಿನ್ನ ರಾತ್ರಿ ಕೊಡೇರಿ ಬಂದರು ಸಿ ವಾಕ್ ಬಲಬದಿಯಲ್ಲಿ ಸತೀಶ್ ಕಾರ್ವಿ ಶವ ಪತ್ತೆಯಾಗಿದೆ.
ಮೃತ ಮೀನುಗಾರರ ಕುಟುಂಬಕ್ಕೆ ಸಂಕಷ್ಟ ಪರಿಹಾರದ ಚೆಕ್ ಹಸ್ತಾಂತರಿಸಿದರು. ಈ ವೇಳೆ ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಮೀನುಗಾರಿಕಾ ಇಲಾಖಾ ಅಧಿಕಾರಿಗಳು, ಪಿಎಸ್‍ಐ ನಿರಂಜನ್ ಗೌಡ, ಮೀನುಗಾರ ಮುಖಂಡರಾದ ದೀಪಕ್ ಕುಮಾರ್ ಶೆಟ್ಟಿ,ಮದನ್ ಕುಮಾರ್ ಉಪ್ಪುಂದ, ನಾಡ ದೋಣಿ ಅಧ್ಯಕ್ಷರಾದ ಆನಂದ ಖಾರ್ವಿ ವೆಂಕಟರಮಣ ಖಾರ್ವಿ, ಪ್ರಮುಖರಾದ ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬಿ.ಎಸ್. ಸುರೇಶ್ ಶೆಟ್ಟಿ, ರಾಮಚಂದ್ರ ಖಾರ್ವಿ, ಆನಂದ ಖಾರ್ವಿ, ಜಗನ್ನಾಥ ಮೊಗವೀರ ಸೇರಿದಂತೆ ಹಲವರು ಉಪಸ್ಥಿತರಿದ್ದರು.