ನೆಲ್ಯಾಡಿ: ಜಿಲ್ಲಾ ಪ್ರಚಾರ ಸಮಿತಿಯ ಸದಸ್ಯರಾಗಿ ಉಷಾ ಅಂಚನ್ ನೇಮಕ
ನೆಲ್ಯಾಡಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿ ನೆಲ್ಯಾಡಿಯ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.
ಉಷಾ ಅಂಚನ್ ಅವರನ್ನು ಕೆಪಿಸಿಸಿ ಉಪಾಧ್ಯಕ್ಷರೂ ದ.ಕ. ಚುನಾವಣಾ ಪ್ರಚಾರ ಉಸ್ತುವಾರಿಯೂ ಆಗಿರುವ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರಚಾರ ಸಮಿತಿಗೆ ನೇಮಿಸಿದ್ದಾರೆ. ತಾಲೂಕು ಪಂಚಾಯತ್ ಮಾಜಿ ಸದಸ್ಯೆಯಾಗಿ, ರಾಜ್ಯ ಕಾಂಗ್ರೆಸ್ ಓಬಿಸಿ ಘಟಕದ ಕಾರ್ಯದರ್ಶಿಯಾಗಿ, ಕಡಬ ಬ್ಲಾಕ್ ಮಹಿಳಾ ಅಧ್ಯಕ್ಷರಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿರುವ ಉಷಾ ಅಂಚನ್ ಅವರು ನೆಲ್ಯಾಡಿ ಕಾಮಧೇನು ಮಹಿಳಾ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ.