ಉತ್ತರಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ಸುರಕ್ಷತೆಗಾಗಿ ಪ್ರಾರ್ಥನೆ
ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಸುರಕ್ಷತೆ ಮತ್ತು ರಕ್ಷಣೆಗಾಗಿ ಪ್ರಾರ್ಥಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್‍ನಲ್ಲಿ ಮರಳು ಕಲಾಕೃತಿಯನ್ನು ರಚಿಸಿದ್ದಾರೆ.`ಕಾರ್ಮಿಕರು ಆದಷ್ಟು ಬೇಗ ಸುರಕ್ಷಿತವಾಗಿ ಹೊರಬರಲು ನಾವು ಜಗನ್ನಾಥನನ್ನು ಪ್ರಾರ್ಥಿಸುತ್ತಿದ್ದೇವೆ. ಸಿಕ್ಕಿಬಿದ್ದಿರುವ 41 ಕಾರ್ಮಿಕರಲ್ಲಿ 5 ಮಂದಿ ಒಡಿಶಾದವರಿದ್ದಾರೆ.
ಎಲ್ಲ ಕಾರ್ಮಿಕರ ರಕ್ಷಣೆಗಾಗಿ ನಾವೆಲ್ಲರೂ ಒಗ್ಗೂಡಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಸುದರ್ಶನ್ ಪಟ್ನಾಯಕ್ ತಿಳಿಸಿದ್ದಾರೆ.ಈ ಕಲಾಕೃತಿಯನ್ನು ತಯಾರಿಸಲು 4 ಟನ್ ಮರಳನ್ನು ಬಳಸಲಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಸಹ ಕೈಜೋಡಿಸಿದರು ಎಂದು ಪಟ್ನಾಯಕ್ ತಿಳಿಸಿದ್ದಾರೆ.ಸುರಂಗದಲ್ಲಿ 41 ಮಂದಿ ಕಾರ್ಮಿಕರ ಸಿಲುಕಿಕೊಂಡಿದ್ದಾರೆ. ಅವರ ರಕ್ಷಣೆಗಾಗಿ 11 ದಿನದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.