ವಸಂತ ಬಂಗೇರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ : ಅಭಿಮಾನಿ ಬಳಗದಿಂದ ದೂರು
ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡಿ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ವಸಂತ ಬಂಗೇರ ಅವರ ಅಭಿಮಾನಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಪ್ರಯತ್ನವಾಗಿದೆ. ಈ ಸಂದೇಶವನ್ನು ತಾಲೂಕಿನ ಹಲವರು ಹಂಚಿಕೊಂಡು ಗೊಂದಲ ಮೂಡಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಚಂದ್ರಹಾಸ ಚಾರ್ಮಾಡಿ, ಅಶೋಕ್ ಪೂಜಾರಿ, ಧನಂಜ ಜೈನ್ ಉಪಸ್ಥಿತರಿದ್ದರು.