ಗೋಸಾಗಾಟ, ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು :ಶಾಸಕ ವೇದವ್ಯಾಸ್ ಕಾಮತ್

ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ಕಾಮತ್ ಅವರು, ಗೋವು ಹಿಂದುಗಳಿಗೆ ಪವಿತ್ರವಾಗಿದೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು ಪೆÇಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಅನೇಕ ಕಡೆಗಳಲ್ಲಿ ಗೋಕಳ್ಳತನ ಹಾಗೂ ಗೋಹತ್ಯೆ ನಡೆಸಿತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಜರಗಿಸಬೇಕು ಗೋಹತ್ಯೆ ಪ್ರತಿಬಂಧಕ ಕಾನೂನು ಜಾರಿಯಲ್ಲಿರುವುದರಿಂದ ಗೋಕಳ್ಳತನ ಹಾಗೂ ಗೋಹತ್ಯೆ ನಡೆಸುವವರ ಮೇಲೆ ಕಠಿಣ ಕ್ರಮ ಜರಗಿಸಬೇಕು ಎಂದಿದ್ದಾರೆ.
