ವೀರರಾಣಿ ಅಬ್ಬಕ್ಕ ಪ್ರಶಸ್ತಿ : ಶ್ರೀಮತಿ ಭವಾನಿ, ಡಾ.ಪಾರ್ವತಿ ಜಿ. ಐತಾಳ್ ಆಯ್ಕೆ

ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ನೀಡುವ 2022-23ನೇ ಸಾಲಿನ ವೀರರಾಣಿ ಅಬ್ಬಕ್ಕ ಪ್ರಶಸ್ತಿಗೆ ಕುಂದಾಪುರದ ಭಂಡಾರ್‍ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ. ಪಾರ್ವತಿ ಜಿ. ಐತಾಳ್ ಮತ್ತು ವೀರರಾಣಿ ಅಬ್ಬಕ್ಕ ಪುರಸ್ಕಾರಕ್ಕೆ ತುಳು ಪಾಡ್ದನದ ಮೇರು ಪ್ರತಿಭೆ ಶ್ರೀಮತಿ ಭವಾನಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಮಾಜಿ ಶಾಸಕ ಜಯರಾಂ ಶೆಟ್ಟಿ ಹೇಳಿದರು.
ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಫೆಬ್ರವರಿ 4ರಂದು ಉಳ್ಳಾಲ ನಗರಸಭಾ ಅಧೀನದಲ್ಲಿರುವ ಮಹಾತ್ಮಗಾಂಧಿ ರಂಗಮಂದಿರದಲ್ಲಿ ನಡೆಯುವ ವೀರರಾಣಿ ಅಬ್ಬಕ್ಕ ಉತ್ಸವ 2022-23ರ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು. ಈ ಜಿಲ್ಲೆಯಲ್ಲಿ ಬಹುಮುಖ ಪ್ರತಿಭೆ ಮಹಿಳೆಯರನ್ನು ಗೌರವಿಸುವ ಮೂಲಕ ಪ್ರಶಸ್ತಿ ಪುರಸ್ಕಾರವನ್ನು ನೀಡುತ್ತಿದ್ದೇವೆ ಎಂದು ಹೇಳಿದರು.ಈ ಸಂದರ್ಭದ ಸುದ್ದಿಗೋಷ್ಟಿಯಲ್ಲಿ ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ, ಅಬ್ಬಕ್ಕ ಉತ್ಸವ ಸಮಿತಿಯ ಖಜಾಂಜಿ ಆನಂದ ಅಸೈಗೋಳಿ, ಅಬ್ಬಕ್ಕ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಧನಲಕ್ಮೀ ಗಟ್ಟಿ ಹಾಗೂ ಅಬ್ಬಕ್ಕ ಉತ್ಸವ ಸಮಿತಿಯ ಉಪಾಧ್ಯಕ್ಷೆ ದೇವಕಿ ಉಳ್ಳಾಲ ಉಪಸ್ಥಿತರಿದ್ದರು.
