ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ.

ಪುತ್ತೂರು :ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ. ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ. ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತ ನೇಮಕಾತಿಯ ಪರೀಕ್ಷೆಗೆ ಆನ್ಲೈನ್ ಮತ್ತು ನೇರ ತರಗತಿಯ ಮೂಲಕ ಹಾಗೂ ಹಲವಾರು ಕಾರ್ಯಗಾರಗಳ ಮೂಲಕ ತರಬೇತಿಯನ್ನು ನೀಡಲಾಗಿತ್ತು. ಇದೀಗ ಎರಡು ಪರೀಕ್ಷೆಗಳ ಅಂಕಗಳ ಆಧಾರದಲ್ಲಿ ಅರ್ಹತಾ ಪಟ್ಟಿಯು ಬಿಡುಗಡೆಗೊಳಿಸಲಾಗಿದ್ದು, ಅಂತಿಮ ಪಟ್ಟಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೂಲಕ ಬಿಡುಗಡೆಗೊಳಿಸುವುದಾಗಿ ಸರಕಾರದ ಪ್ರಕಟಣೆಯು ತಿಳಿಸಿರುತ್ತದೆ. ಅರ್ಹ ಎಲ್ಲ ಅಭ್ಯರ್ಥಿಗಳನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಅಭಿನಂದಿಸಿದ್ದಾರೆ.

Related Posts

Leave a Reply

Your email address will not be published.