ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನ ವಾರ್ಷಿಕೋತ್ಸವ ಮತ್ತು ಫ್ಯಾಶನ್ ಶೋ ಕಾರ್ಯಕ್ರಮ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನ ವಾರ್ಷಿಕೋತ್ಸವ ಮತ್ತು . ಕಾಲೇಜಿನ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಉಡುಪುಗಳ ಪ್ರದರ್ಶನ ಮತ್ತು ರ್‍ಯಾಂಪ್ ವಾಕ್ ನಡೆಯಿತು.

ಅನೇಕ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ತುಳು ಮತ್ತು ಕನ್ನಡ ಭಾಷೆಯ ನಾಟಕ, ಚಲನಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿರುವ  ಅರವಿಂದ ಬೋಳಾರ್  ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸಮಯ ಪ್ರಜ್ಞೆ ಹಾಗೂ ವಿದ್ಯೆ ಎಂಬುದು ಅತಿ ಮುಖ್ಯವಾದಂತಹ ವಿಚಾರ ಎಂದು ತಿಳಿಸಿದರು.

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಶಿಸ್ತಿನ ವ್ಯಾಸಂಗದೊಂದಿಗೆ ದೃಢತೆಯನ್ನು ಮೈಗೂಡಿಸಿಕೊಂಡು ಪ್ರಗತಿಪಥದತ್ತ ಸಾಗಬೇಕು ಎಂದು ನುಡಿದು ಶುಭ ಹಾರೈಸಿದರು .

ನಿರ್ದೇಶಕಿಯಾದ ಶ್ರೀಮತಿ ಮಮತಾ ಮತ್ತು  ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ಮತ್ತು ಸಾಂಸ್ಕೃತಿಕ ಸಮಿತಿಯ ವ್ಯವಸ್ಥಾಪಕಿ ಶ್ರೀಮತಿ ರಾಝಿಕಾ ಉಪಸ್ಥಿತರಿದ್ದರು.ಸಂಸ್ಥೆಯ ಎಲ್ಲಾ ಉಪನ್ಯಾಸಕರ ಮತ್ತು ಉಪನ್ಯಾಸಕೇತರ ವೃಂದದವರು,ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರೀಮತಿ ಮಧುಮಿತಾ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿ ಹಾಗೂ ಕನ್ನಡ  ಉಪನ್ಯಾಸಕಿ ಶ್ರೀಮತಿ ಅನುಪಮ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕಿ ಕುಮಾರಿ ಅನ್ಸೀಟಾ ಸ್ವಾಗತಿಸಿ, ಉಪನ್ಯಾಸಕಿ ಕುಮಾರಿ ಸೋಫಿಯಾ ವಂದಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಸ್ವಾತಿ   ಕಾರ್ಯಕ್ರಮವನ್ನು ನಿರೂಪಿಸಿದರು.

Related Posts

Leave a Reply

Your email address will not be published.