ವಿಟ್ಲ: ಅಕ್ರಮ ಗೋ ಸಾಗಾಟ ಪತ್ತೆ
ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸ್ರು ಕಾರ್ಯಾಚರಣೆ ನಡೆಸಿ ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ಳಂಬೆಳಗ್ಗೆ ವಿಟ್ಲ ಸಮೀಪದ ಬೋಳಂತೂರಿನಲ್ಲಿ ನಡೆದಿದೆ.
ರೌಂಡ್ಸ್ ಕರ್ತವ್ಯದಲ್ಲಿದ್ದ ವಿಟ್ಲ ಎಸ್‍ಐ ಸಂದೀಪ್ ಕುಮಾರ್ ಶೆಟ್ಟಿ ಮತ್ತು ಸಿಬ್ಬಂದಿಗಳು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಸಾಯಿಬು ಬ್ಯಾರಿ ನಗ್ರಿ, ಪ್ರದೀಪ್ ಸಿಕ್ವೇರಾ ಬಂಧಿತರು.ಈ ವೇಳೆ ವಾಹನದಲ್ಲಿ ನಾಲ್ಕು ಜಾನುವಾರುಗಳಿದ್ದು, ಅವುಗಳನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ..