ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯ ವರ್ತನೆ

ವಿಟ್ಲ: ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ (46) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನಲ್ಲೇನಿದೆ?: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ:13-05-2023 ರಂದು ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ಮೋಟಾರ್ ಸೈಕಲ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಮೋಟಾರ್ ಬೈಕ್ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 79/2023 ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಸದ್ರಿ ಪ್ರಕರಣದಲ್ಲಿ ಆರೋಪಿ ಅಬೂಬಕ್ಕರ್ ಕೆ (46) ಎಂಬಾತನನ್ನು ದಸ್ತಗಿರಿ ಮಾಡಿ ತನಿಖೆ ಕೈಗೊಂಡಿದ್ದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಸದ್ರಿ ಪ್ರಕರಣದ ಆರೋಪಿ ಪತ್ತೆಯ ಕಾರ್ಯದಲ್ಲಿ ಶ್ರೀ ನಾಗರಾಜ್ ಹೆಚ್ ಈ ಪೊಲೀಸ್ ನಿರೀಕ್ಷಕರು ವಿಟ್ಲ ಪೊಲೀಸ್ ಠಾಣೆ ರವರ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ಹೆಚ್‌ಸಿ ರಕ್ಷಿತ್ ಮತ್ತು ಪಿಸಿ ಹೇಮರಾಜರವರು ಭಾಗವಹಿಸಿರುತ್ತಾರೆ
