ಮಕ್ಕಳನ್ನುಶಾಲೆಗೆ ಕರೆದೊಯ್ಯುವ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತ
ವಿಟ್ಲ: ಆಟೋ ರಿಕ್ಷಾ ಚಾಲಕರೋರ್ವರು ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನ.9 ರಂದು ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ.
ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತರು.
ಜಯಕರ ಪೂಜಾರಿ ರವರು ಆಟೋ ರಿಕ್ಷಾ ಚಾಲಕರಾಗಿದ್ದು, ಪ್ರತಿದಿನ ಬೆಳಗ್ಗೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಎಂದಿನಂತೆ ಇಂದು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ಆಟೋ ರಿಕ್ಷಾ ನಿಲ್ಲಿಸಿದ್ದು, ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ.
ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.