ವಿಟ್ಲ: ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ: ಆಟೋದಲ್ಲಿದ್ದ ಪ್ರಯಾಣಿಕ ಮೃತ್ಯು
ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ.
ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ ನಾಗೇಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.