ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ
ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ವಾಹನ ನಿಲ್ಲಿಸಿ ಹೊರಗಡೆ ಬಂದಿದ್ದಾರೆ.
ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ವಿನಯ ಎಂಬವರ ಸರ್ವೀಸ್ ಸ್ಟೇಷನ್ ನಿಂದ ನೀರು ಹರಿಸಲಾಯಿತು. ಘಟನೆಯಲ್ಲಿ ವಾಹನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.