ವಿಟ್ಲ:ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಮೃತ್ಯು
ವಿಟ್ಲ: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮೃತರನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಮ್ ಎಂದು ಗುರುತಿಸಲಾಗಿದೆ.
ಬೈಕ್ ಬಸ್ಸಿನಡಿಗೆ ಎಸೆಯಟ್ಟಿದ್ದು, ಸಂಪೂರ್ಣ ಜಖಂಗೊಂಡಿದೆ. ಕಬಕ ಕಡೆಯಿಂದ ಬಿ.ಸಿ ರೋಡ್ ಗೆ ತೆರಳುತ್ತಿದ್ದಾಗ ಎದುರಿನಿದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬಿಟ್ಟು ಬದಿಯ ಕಣಿವೆಗೆ ಜಾರಿ ನಿಂತಿದೆ ಎನ್ನಲಾಗಿದೆ. ಆಶಿಮ್ ಕಬಕದಲ್ಲಿ ಹಳೆಯ ಆಕ್ಟೀವಾ ವಾಹನ ಖರೀದಿಸಿ, ತನ್ನ ಸ್ನೇಹಿತನ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಸ್ಥಳ ಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.