ವಿಟ್ಲ: ಸಮಸ್ಯೆಯ ಆಗರವಾಗಿರುವ ವಿಟ್ಲ ಪಟ್ಟಣ ಪಂಚಾಯತ್

ವಿಟ್ಲ: ದಿನದಿಂದ ದಿನಕ್ಕೆ ಬೆಳವಣಿಗೆ ಕಾಣುತ್ತಿರುವ ವಿಟ್ಲ ಪಟ್ಟಣ ಪಂಚಾಯತ್ ಸಮಸ್ಯೆಯ ಆಗರವಾಗಿ ಜನರು ಪರಿತಪಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ಭಾಗದ ಶಾಸಕರು ಮಾತ್ರ ಪಟ್ಟಣ ಪಂಚಾಯತ್ ನಲ್ಲಿ ಸಭೆ ನಡೆಸಿ ಕೇವಲ ಸಲಹೆ ಸೂಚನೆಗಳನ್ನು ಕೊಟ್ಟು ಹೋಗುವ ಮೂಲಕ ಜನರ ಆಕಾಂಕ್ಷೆಗಳಿಗೆ ತಣ್ಣೀರೆರೆಯುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿರುವ ಸಮಸ್ಯೆಗಳಿಗೊಂದು ಅವರು ಸರಿಯಾದ ಪರಿಹಾರ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಜನರ ಪರವಾಗಿ ಹೋರಾಟ ಮಾಡಬೇಕಾಗಬಹುದು ಎಂದು ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವುರವರು ಹೇಳಿದರು.

vitla

ಅವರು ವಿಟ್ಲದ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಒಟ್ಟಾಗಿ ನಾವು ಅವಲೋಕನ ಮಾಡಿದಾಗ ಇಲ್ಲಿ ಇಚ್ಚಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ರಾಜ್ಯ ಸರಕಾರದ ಜನಪ್ರತಿನಿಧಿಗಳ ಇಚ್ಚಾ ಶಕ್ತಿಯ ಕೊರತೆಯಿಂದ ಒಂಬತ್ತು ತಿಂಗಳುಗಳಿAದ ಒಂದು ಪಟ್ಟಣ ಪಂಚಾಯತ್ ನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಅಸಾಧ್ಯ ವಾಗಿರುವುದು ದುರಾದೃಷ್ಟಕರ. ವಿಟ್ಲ ಪಟ್ಟಣ ಪಂಚಾಯತ್ ಹಾಗು ವಿಟ್ಲ ಪರಿಸರ ಈ ಹಿಂದೆ ವಿಟ್ಲ ವಿಧಾನಸಭಾ ಕ್ಷೇತ್ರವಾಗಿತ್ತು ಎನ್ನುವುದನ್ನು ನಾನು ನೆನಪು ಮಾಡುತ್ತಿದ್ದೇನೆ. ಯಾವಾಗ ಈ ವಿಧಾನ ಸಭಾ ಕ್ಷೇತ್ರ ಇಲ್ಲಿಂದ ಹೋಯಿತೋ ಅನಂತರದ ದಿನಗಳಲ್ಲಿ ಈ ಭಾಗದ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರು.

vitla


ಪುತ್ತೂರು ನಗರಸಭಾ ಮಾಜಿ ಸದಸ್ಯ ಅನ್ವರ್ ಖಾಸಿಂ, ಎನ್.ಎಸ್.ಯು.ಐ. ರಾಜ್ಯ ಕಾರ್ಯದರ್ಶಿ ಫಾರುಕ್ ಬಾಯಾಬೆ, ಅಶೋಕ್ ಶೆಟ್ಟಿ, ಇಬ್ರಾಹಿಂ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.