ವಿದ್ಯುತ್ ಶಾಕ್ ತಗುಲಿ ಬಾಲಕ ಸಾವು

ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ ಅವರ ಪುತ್ರ ಜತೇಶ್ (7 ವ) ಮೃತ ಬಾಲಕ.
ವ್ಯಕ್ತಿಯೋರ್ವರು ಹಂದಿ ಹಿಡಿಯಲು ಅಕ್ರಮವಾಗಿ ಗದ್ದೆಯಲ್ಲಿ ವಿದ್ಯುತ್ ಅಳವಡಿಸುರುವುದೇ ಘಟನೆಗೆ ಕಾರಣವೆಂದು ಆರೋಪಿಸಿರುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೆÇಲೀಸರು ಸೂಕ್ತ ಕ್ರಮಕೈಗೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ. ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯಕೇಂದ್ರದ ಶವಗಾರದಲ್ಲಿ ಇಡಲಾಗುದ್ದು, ಬದಿಯಡ್ಕ ಠಾಣಾ ಪೆÇಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
