ವಿಟ್ಲ : ನೀರಿನ ಟ್ಯಾಂಕ್ ಗೆ ಹಾರಿ ಮಹಿಳೆ ಆತ್ಮಹತ್ಯೆ
ವಿಟ್ಲ: ಮಹಿಳೆಯೊಬ್ಬರು ಆತ್ಯಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ನೆಕ್ಕರೆ ಮಠ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಶಾಂತಲಾ (41) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಸಹೋದರ ನೀಡಿದ ದೂರಿನ ಅನ್ವಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಪರೀತ ಸೊಂಟ ನೋವಿನಿಂದ ಬಳಲುತ್ತಿದ್ದು ಇದಕ್ಕೆ ಸ್ಥಳೀಯವಾಗಿ ಆಯುರ್ವೇದಿಕ್ ಚಿಕಿತ್ಸೆ ಮಾಡಿದರು ನೋವು ಕಡಿಮೆ ಯಾಗದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೀರಿನ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಹೋದರ ನೀಡಿದ ದೂರಿನ ಅನ್ವಯ ತಿಳಿದು ಬಂದಿದೆ.