ಉಚಿತ ವೈದ್ಯಕೀಯ ತಪಾಸಣಾ ಶಿಬಿರ:ವಿಟ್ಲದ ಒಕ್ಕೆತ್ತೂರು ಶಾಲೆಯಲ್ಲಿ ನಡೆದ ಕಾರ್ಯಕ್ರಮ
ವಿಟ್ಲ: ವಿಟ್ಲ ಸಮೀಪದ ಒಕ್ಕೆತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಕದಳಿ ಮಹಿಳಾ ಸಂಘ ದಕ್ಷಿಣ ಕನ್ನಡ, ವಿಟ್ಲ ಲಯನ್ಸ್ ಕ್ಲಬ್ ಇದರ ಸಹಯೋಗದಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಮಂಗಳೂರು ಇಲ್ಲಿನ ನುರಿತ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಒಕ್ಕೆತ್ತೂರು ಶಾಲೆಯಲ್ಲಿ ನಡೆಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೆತ್ತೂರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮಹಮ್ಮದ್ ಹಾರೀಶ್ ಸಿಎಚ್ ಅವರು ವಹಿಸಿದ್ದರು.ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮಹಮ್ಮದ್ ಹಾರೀಶ್ ಸಿ.ಎಚ್ ಅವರನ್ನು ಕದಳಿ ಮಹಿಳಾ ವೇದಿಕೆ ದಕ್ಷಿಣ ಕನ್ನಡ ವತಿಯಿಂದ ಸನ್ಮಾನಿಸಲಾಯಿತು. ನುರಿತ ವೈದ್ಯರಿಂದ ಕಣ್ಣು, ಕಿವಿ, ಹೃದಯ, ಮೊದಲಾದ ತಪಾಸಣೆ ನಡೆಸಲಾಯಿತು.
ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ, ಅಕ್ಕಮಹಾದೇವಿ ಮಹಿಳಾ ಸಂಘದ ಅಧ್ಯಕ್ಷೆ ಸುಮಾ ಅರುಣ್ ಮಾನ್ವಿ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಸುರೇಖಾ ಎಳವಾರ, ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನ್ ರಾವ್, ಯೆನೆಪೋಯ ಮೆಡಿಕಲ್ ಕಾಲೇಜಿನ ಕ್ಯಾಂಪ್ ಕೋರ್ಡಿನೇಟರ್ ಅಬ್ದುಲ್ ರಜಾಕ್, ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರವಿಶಂಕರ್, ಶಾಲಾ ಮುಖ್ಯೋಪಾಧ್ಯಾಯ ಗೀತಾ ಬಿ, ಸಹ ಶಿಕ್ಷಕಿ ಮೇರಿ ಡಿಸೋಜ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಇಸ್ಮಾಯಿಲ್, ಅತಿಥಿ ಶಿಕ್ಷಕಿ ಶ ಪ್ರಿಯಲತ ಉಪಸ್ಥಿತರಿದ್ದರು.ಸಹ ಶಿಕ್ಷಕ ತೌಸಿಫ್ ಅಹ್ಮದ್ ನಿರೂಪಿಸಿದರು. ಸುರೇಖಾ ಎಳವಾರ ಸ್ವಾಗತಿಸಿದರು. ಗೀತಾ ಬಿ ವಂದಿಸಿದರು.