ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ವಿವಾ ಫ್ಯಾಶನ್ ಗೆ ಬೆಂಕಿ.

ಪುತ್ತೂರು ತಾಲ್ಲೂಕು ಉಪ್ಪಿನಂಗಡಿ ಇಲ್ಲಿನ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದಿದ್ದು, ಹೊತ್ತಿ ಉರಿದಿದೆ.
ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅಪ್ಟಿಕಲ್ಸ್ , ಆರ್ ಕೆ ಜ್ಯುವೆಲ್ಲರ್ ಸೇರಿದಂತೆ ಹಲವು ಅಂಗಡಿಗಳಿವೆ.
ಸ್ಥಳೀಯರು ಹಾಗೂ ಅಗ್ನಿಶಾಮಕದಳದಿಂದ ಬೆಂಕಿ ನಂದಿಸುವ ಕೆಲಸ ನಡೆದಿದೆ ಎಂದು ತಿಳಿದು ಬಂದಿದೆ.
