ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ
ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು.
ನಾವು ಪ್ರತಿದಿನ ಎದ್ದು ದೇವರ ಮನೆಯಲ್ಲಿ ನಮಸ್ಕಾರ ಮಾಡಿಯೇ ಹೊರಡೋದು ,ನಾನು ಕಿಸ್ಕಿಂದ ಜಿಲ್ಲೆಯಲ್ಲಿರುವವನು, ನಾನು ಪ್ರತಿ ವರ್ಷ ಆಂಜನೇಯ ಮಾಲೆ ಹಾಕುತ್ತೇನೆ, ಭಕ್ತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಮಾಲೆ ಹಾಕುತ್ತೇನೆ. ಬಿಜೆಪಿಗೆ ಚುನಾವಣೆ ಬಂದಾಗ ಬಿಜೆಪಿಗೆ ಧರ್ಮ, ಮಸೀದಿ, ಪಾಕಿಸ್ತಾನ ನೆನಪಾಗುತ್ತದೆ ಮತ್ತೊಬ್ಬರ ಹೆಗಲಲ್ಲಿ ಬಂದೂಕು ಒಟ್ಟು ಬಿಜೆಪಿ ದೇಶ ಆಳಿದೆ, ಕರ್ನಾಟಕದಲ್ಲಿ ಆದ ಪರಿಸ್ಥಿತಿಯೇ ದೇಶದಲ್ಲೂ ಬಿಜೆಪಿಗೆ ಬರಲಿದೆ ಎಂದರು