ಆಲಂಕಾರು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಡಾಟಾ ಸೈನ್ಸ್ ಕಾರ್ಯಾಗಾರ
ಆಲಂಕಾರು :ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ, ಪುತ್ತೂರು ಇದರ ಸಹಯೋಗದಲ್ಲಿ, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿ ಮತ್ತೆ ಮತ್ತು ಡಾಟಾ ಸೈನ್ಸ್ ನ ಕುರಿತಾದ ಕಾರ್ಯಾಗಾರ ನಡೆಯಿತು.
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ನ ತೃತೀಯ ವರ್ಷದ ವಿದ್ಯಾರ್ಥಿಗಳಾದ ಜೀವಿತ್, ಆಕಾಶ್ ಪಿ, ಧನುಷ್ ಕುಮಾರ್, ಗಗನ್ ಕೆ, ಅಶ್ವಿಜ ಯು ಪೈ ಹಾಗೂ ಅನುಶ್ರೀ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಸುಮಾರು 64 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.
ಕಾರ್ಯಾಗಾರದ ಬಳಿಕ ಕೃತಕ ಬುದ್ಧಿಮತ್ತೆ ಆಧಾರಿತ ವಿವಿಧ ಮಾದರಿಗಳ ಪ್ರಾತ್ಯಕ್ಷಿಕೆ ನಡೆಯಿತು. ಸಂಸ್ಥೆಯ ಮುಖ್ಯಗುರುಗಳಾದ ಸತೀಶ್ ಕುಮಾರ್ ಜಿ ಆರ್, ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಗಣೇಶ್ ಹಿರಿಂಜ, ಪದಾಧಿಕಾರಿ ಶ್ರೀಮತಿ ಭಾಗೀರಥಿ, ಕನ್ನಡ ಮಾಧ್ಯಮ ವಿಭಾಗದ ಮುಖ್ಯಮಾತಾಜಿ ಶ್ರೀಮತಿ ಆಶಾ ರೈ, ಆಂಗ್ಲ ಮಾಧ್ಯಮ ವಿಭಾಗದ ಶಿಕ್ಷಕರುಗಳು ಉಪಸ್ಥಿತರಿದ್ದರು.