ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 6.08.2025 ರಂದು ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ “ಸ್ತನ್ಯಪಾನಕ್ಕೆ ಪ್ರಾಮುಖ್ಯತೆ ನೀಡಿ: ಶಾಶ್ವತ ಬೆಂಬಲ ವ್ಯವಸ್ಥೆಗಳನ್ನು ನಿರ್ಮಿಸಿ” ಎಂಬ ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಕೌಮಾರಭೃತ್ಯ ವಿಭಾಗ ಹಾಗೂ ಎನ್ ಎಸ್ ಎಸ್ ಘಟಕದ ಸಹಭಾಗಿತ್ವದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ. ಕವಿತಾ ಬಿ ಎಂ ಇವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾದ ಡಾ ವಿನಯ್ ಶಂಕರ್ ಭಾರಧ್ವಾಜ್ ಬಿ ಇವರು ವಿಶ್ವ ಸ್ತನ್ಯಪಾನ ಸಪ್ತಾಹವು ಪ್ರತೀ ವರ್ಷದ ಆಗಸ್ಟ್ ತಿಂಗಳ ಮೊದಲನೇ ವಾರ ನಡೆಯುತ್ತದೆ ಹಾಗೂ ಸ್ತನ್ಯಪಾನ ಮಹತ್ವದ ಅರಿವು ಜನಸಾಮಾನ್ಯರಿಗೆ ತಿಳಿಸುವುದು ಅತ್ಯಂತ ಮುಖ್ಯ ಎಂದು ತಿಳಿಸುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ನಂತರ ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗದ ಸಹ ಪ್ರಾಧ್ಯಾಪಕಿಯಾದ ಡಾ. ರಶ್ಮಿ ಕೆ ಎಸ್ ಇವರು ಸ್ತನ್ಯಪಾನ ಪ್ರಾಮುಖ್ಯತೆಯ ಕುರಿತು ಪ್ರಾತ್ಯಕ್ಷಿಕೆಯ ಮೂಲಕ ವಿಧ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕು. ಅನನ್ಯ ಎಚ್ ಎಸ್ ಹಾಗೂ ಭವಿತ್ ಶಂಕರ್ ಶೆಟ್ಟಿ ನಿರೂಪಿಸಿ, ಕು. ಸ್ನೇಹ ಕೆ ಸಿ ಸ್ವಾಗತಿಸಿ, ಮೇಘನ ಯು ಮತ್ತು ಬಳಗ ಪ್ರಾರ್ಥಿಸಿ, ಕು. ಸ್ವಾತಿ ಆರ್ ಎನ್ ವಂದಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಹಾಗೂ ಪದವಿ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.