ಯೆಯ್ಯಾಡಿ :ಏಸ್ ಫುಡ್ಸ್ ಪ್ರೈವೇಟ್ ಲಿ. ಚಿಪ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ

ಮಂಗಳೂರಿನ ಯೆಯ್ಯಾಡಿಯಲ್ಲಿರುವ ಕೈಗಾರಿಕಾ ಸಂಕೀರ್ಣದಲ್ಲಿ ಚಿಪ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಧಗಧಗನೆ ಫ್ಯಾಕ್ಟರಿ ಹೊತ್ತಿ ಉರಿದಿದೆ. ಚಿಫ್ಸ್ ತಯಾರಿಕಾ ಫ್ಯಾಕ್ಟರಿಯಾದ ಏಸ್ ಫುಡ್ ಪ್ರೈವೆಟ್ ಲಿಮಿಟೆಡ್‍ನ ಎಂಬ ಹೆಸರಿನ ಫ್ಯಾಕ್ಟರಿಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿಬೆಂಕಿ ತಗುಲಿದೆ.

ಸ್ಥಳಕ್ಕೆ ಕದ್ರಿ ಹಾಗೂ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.