ಆಶಾ ತಿಮ್ಮಪ್ಪ ಪರ ಮತಯಾಚನೆಗೆ ಪುತ್ತೂರಿಗೆ ಬಂದಿಳಿದ ಯೋಗಿ ಆದಿತ್ಯನಾಥ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತಯಾಚನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಹೆಲಿಕಾಪ್ಟರ್ ಮೂಲಕ ನಗರದ ಹೊರವಲಯದ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ಗೆ ಆಗಮಿಸಿದ್ದಾರೆ.
ಅಲ್ಲಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಅಂಚೆ ಕಚೇರಿ ಬಳಿಯಿಂದ ಕೋರ್ಟ್ ರಸ್ತೆಯಾಗಿ ಸಾಗಿ ಕಿಲ್ಲೆ ಮೈದಾನದ ತನಕ ಜಾಥಾ ನಡೆಯಲಿದೆ.