ವೈಎಸ್‌ಆರ್ ಸಂಸ್ಥಾಪಕಿ ವೈ. ಎಸ್. ಶರ್ಮಿಳಾ ಕಾಂಗ್ರೆಸ್‌ಗೆ ಸೇರ್ಪಡೆ

ತೆಲಂಗಾಣದಲ್ಲಿ ವೈಎಸ್‌ಆರ್ ಪಕ್ಷವನ್ನು ಸ್ಥಾಪಿಸಿದ್ದ ಹಿಂದಿನ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ರಾಜಶೇಖರ ರೆಡ್ಡಿಯವರ ಮಗಳು ಮತ್ತು ಈಗಿನ ಆಂಧ್ರದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯವರ ಸಹೋದರಿ ವೈ. ಎಸ್. ಶರ್ಮಿಳಾ ಅವರು ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಶರ್ಮಿಳಾ ಅವರು ಕಾಂಗ್ರೆಸ್ ಸೇರಿದ್ದಲ್ಲದೆ ತಮ್ಮ ಪಕ್ಷವನ್ನು ಕಾಂಗ್ರೆಸ್ಸಿನಲ್ಲಿ ವಿಲೀನ ಮಾಡಿದರು.
