ಅರಸೀಕೆರೆ : ನಿಂತಿದ್ದ ರೈಲು ಬೋಗಿಯಲ್ಲಿ ಬೆಂಕಿ ಅವಘಡ
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಅರಸೀಕೆರೆ ನಗರ ರೈಲು ನಿಲ್ದಾಣದಲ್ಲಿ ಸ್ವಚ್ಛತೆಗೆ ನಿಲ್ಲಿಸಿದ್ದ ನಿಜಮುದ್ದಿನ್ ಮೈಸೂರು ಚೆನ್ನೈ ಎಕ್ಸ್ಪ್ರೆಸ್ ರೈಲು ಗಾಡಿಯ ಒಂದೇ ಭೋಗಿಯ ಎರಡು ಕಂಪಾರ್ಟ್ಮೆಂಟ್ಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು. ಅದೃಷ್ಟವಶಾತ್ ಬೋಗಿಯಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ, ಇದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸುದ್ದಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳ ತಂಡ ಮತ್ತು ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸುವ ಮೂಲಕ ಬೆಂಕಿ ಮತ್ತಷ್ಟು ಹರಡುವುದನ್ನು ತಪ್ಪಿಸಿದರು.