ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ:ಸಚಿವ ಬಿ.ಸಿ.ನಾಗೇಶ್
2020-21 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಆಗಸ್ಟ್ 9ರಂದು ಮಧ್ಯಾಹ್ನ 3.30ಕ್ಕೆ ಪ್ರಕಟಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಅವರು, ಜುಲೈ.19 ಮತ್ತು 22ರಂದು ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 9ರ ಸೋಮವಾರದ ಮಧ್ಯಾಹ್ನ 3.30ಕ್ಕೆ ಅಧಿಕೃತವಾಗಿ ಪ್ರಕಟಿಸೋದಾಗಿ ತಿಳಿಸಿದರು.
ಕೊರೋನಾ ಭೀತಿಯ ನಡುವೆಯೂ ಈ ಬಾರಿ 8.72ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆಗಸ್ಟ್ 9ರ ಸೋಮವಾರ ಮಧ್ಯಾಹ್ನ 3.30ಕ್ಕೆ ಪ್ರಕಟಗೊಳ್ಳಲಿರುವಂತ ಫಲಿತಾಂಶದಲ್ಲಿ, ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತ ಪಡಿಸಿದರು.
ನಾಳೆ ಪ್ರಕಟಗೊಳ್ಳಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣ,sslc.karnataka.gov.in, kseeb.kar.nic.in ಅಥವಾ karresults.nic.in ನಲ್ಲಿ ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು ಈ ಜಾಲತಾಣಗಳಿಗೆ ಭೇಟಿ ನೀಡಿ, ನಿಮ್ಮ ನೋಂದಣಿ ಸಂಖ್ಯೆಯನ್ನು ನಮೋದಿಸುವ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.