ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ: ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ
ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಪ್ರಯುಕ್ತ ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ ನೀಡಲಾಯಿತು.
ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ರ್‍ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು. ಮ್ಯಾರಥಾನ್ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡಲು ಇದೊಂದು ಉತ್ತಮ ಕಾರ್ಯಕ್ರಮ. ಬಹಳ ಅದ್ಭುತವಾಗಿ ಸ್ಮಾರ್ಟ್ ಸಿಟಿಯಿಂದ ಮಾಡಿದ್ದಾರೆ ಎಂದು ಹೇಳಿದರು.
ಆನಂತರ ಮಂಗಳೂರು ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಆಜಾದಿಕಾ ಅಮೃತ್ ಮಹೋತ್ಸವ್ ಈ ಕಾರ್ಯಕ್ರಮವನ್ನು ಮಂಗಳೂರು ಸ್ಮಾರ್ಟ್‌ಸಿಟಿ ವತಿಯಿಂದ ವಿಂಟೇಜ್ ಕಾರು, ಸೈಕಲ್ ರ್‍ಯಾಲಿ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಮಾಡಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡುವ ಸಲುವಾಗಿ ಮತ್ತು ಸ್ವಾತಂತ್ರ್ಯೋತ್ಸವದ ೭೫ನೇ ವರ್ಷಾಚರಣೆಯನ್ನು ಎಲ್ಲರೂ ಆಚರಣೆ ಮಾಡಬೇಕೆನ್ನು ಉದ್ದೇಶದಿಂದ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.
ನಗರದ ಎ.ಬಿ. ಶೆಟ್ಟಿ ವೃತ್ತದ ಬಳಿಯಿಂದ ಹೊರಟ ವಿಂಟೇಜ್ ಕಾರು ಮತ್ತು ಸೈಕಲ್ ರ್‍ಯಾಲಿ ವಾಕಾಥಾನ್ ನಗರದ ಹಲವು ಕಡೆ ಸಾಗಿತು.ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.