ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥಿವ ಶರೀರ ಉಡುಪಿಗೆ ರವಾನೆ
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿನ್ನೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ.
ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ, ಮಗ, ಮಗಳು ಸೇರಿ ಕುಟುಂಬಸ್ಥರು ಭಾಗಿಯಾಗಿದ್ದರು
9.30 ರ ವೇಳೆಗೆ ಉಡುಪಿಯ ಶೋಕಮಾತಾ ಚರ್ಚ್ ಗೆ ಪಾರ್ಥಿವ ಶರೀರ ತಲುಪಲಿದೆ. 11 ಗಂಟೆ ಸುಮಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕ ದರ್ಶನ ಇಡಲಾಗುತ್ತದೆ. 3 ಗಂಟೆ ವೇಳೆ ಮತ್ತೆ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಕೊಂಡೊಯ್ಯಲಾಗುತ್ತದೆ.
ಮಲ್ಲಿಕಟ್ಟೆ ಬಳಿಯ ಕಾಂಗ್ರೆಸ್ ಕಚೇರಿಯಲ್ಲಿ 3 ರಿಂದ 5 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಫಾದರ್ ಮುಲ್ಲರ್ ಆಸ್ಪತ್ರೆಯ ಶವಾಗಾರದಲ್ಲಿ ಇಡಲು ವ್ಯವಸ್ಥೆ ಮಾಡಲಾಗಿದೆ