ಆಸ್ಕರ್ ಫೆರ್ನಾಂಡಿಸ್‌ರವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್

ಅನಾರೋಗ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ, ರಾಜ್ಯಸಭೆ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಆರೋಗ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ವಿಚಾರಿಸಿದರು.


ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಆಗಮಿಸಿದ ಇವರಿಬ್ಬರು ಆಸ್ಕರ್ ಫೆರ್ನಾಂಡಿಸ್ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಕರ್ ಅವರ ಆರೋಗ್ಯಸ್ಥಿತಿ ಕುರಿತು ಅವರ ಪತ್ನಿ ಬ್ಲಾಸಮ್ ಫರ್ನಾಂಡಿಸ್ ಹಾಗೂ ಆಸ್ಪತ್ರೆ ಹಿರಿಯ ವೈದ್ಯರ ಜತೆ ಸಮಾಲೋಚನೆ ನಡೆಸಿದರು.

ಇದೇ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿರಾದ ಬಿ.ರಮಾನಾಥ ರೈ, ಯು.ಟಿ. ಖಾದರ್, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಮೊಯ್ದೀನ್ ಬಾವಾ, ಐವನ್ ಡಿಸೋಜ, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಮುಂತಾದವರು ಉಪಸ್ಥಿತರಿದ್ದರು. ಆಸ್ಕರ್ ಫೆರ್ನಾಂಡಿಸ್ ಅವರು ಯೋಗಾಭ್ಯಾಸದ ವೇಳೆ ಮಂಗಳೂರು ನಗರದ ಅತ್ತಾವರದಲ್ಲಿರೋ ಫ್ಲ್ಯಾಟ್ ನಲ್ಲಿ ಬಿದ್ದು ಗಾಯಗೊಂಡಿದ್ದರು

 

 

Related Posts

Leave a Reply

Your email address will not be published.