ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಎಂ.ಬಿ ಪಾಟೀಲ್
ಕಾಂಗ್ರೆಸ್ ಹಿರಿಯ ಮುಖಂಡ ಅಸ್ಕರ್ ಫೆರ್ನಾಂಡಿಸ್ ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಬುಧವಾರದಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯವನ್ನು ವಿಚಾರಿಸಿದರು. ತದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರಿಗೆ ಸದ್ಯ ಪರಿಣಿತ ತಜ್ಞ ವೈದ್ಯರ ತಂಡ ಚಿಕಿತ್ಸೆ ಕೊಡ್ತಾ ಇದ್ದಾರೆ.ಮಣಿಪಾಲ್ ವೈದ್ಯರು ಸೇರಿದಂತೆ ಬೇರೆ ಬೇರೆ ತಜ್ಞ ವೈದ್ಯರು ಚಿಕಿತ್ಸೆಯನ್ನು ಕೊಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ಮುಖಂಡರಾದ ಸೋನಿಯಗಾಂಧಿ ಹಾಗೂ ರಾಹುಲ್ ಗಾಂಧಿ, ಪ್ರಿಯಾಂಕ ಅವರ ಕುಟುಂಬದ ಜೊತೆ ಮಾತನಾಡಿದ್ದಾರೆ.
ಪೇಜಾವರ ಮಠದ ಸ್ವಾಮೀಜಿಗಳು ಕೂಡಾ ಅವರ ಆರೋಗ್ಯ ವಿಚಾರಿಸಿದ್ದಾರೆ. ಆಸ್ಕರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ತಂದೆ ಉಪಾಧ್ಯಕ್ಷರಾಗಿದ್ರು, ನಮ್ಮ ತಂದೆಯವರ ಸ್ವಭಾವ ಮತ್ತು ಆಸ್ಕರ್ ಅವರ ಸ್ವಭಾವ ಒಂದೇ ಆಗಿತ್ತು. ಹೀಗಾಗಿ ನನ್ನ ಮೇಲೂ ವಿಶೇಷ ಪ್ರೀತಿ ಇದ್ದ ಕಾರಣ ಈ ಸ್ಥಾನಕ್ಕೇರಲು ಸಹಾಯ ಮಾಡಿದ್ದರು. ಅವರ ಆರೋಗ್ಯ ಶೀಘ್ರದಲ್ಲಿ ಸುಧಾರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಅವರು ಹೇಳಿದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ಮುಂಜುನಾಥ್ ಭಂಡಾರಿ, ಎಂ.ಎ.ಗಪೂರ್, ನವೀನ್ ಡಿಸೋಜಾ ಸೇರಿದಂತೆ ಉಪಸ್ಥಿತರಿದ್ದರು.