ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಗಣ್ಯರಿಂದ ಸಂತಾಪ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

“ರಾಜ್ಯಸಭಾ ಸಂಸದ ಆಸ್ಕರ್ ಫೆರ್ನಾಂಡೀಸ್ ರ ನಿಧನದಿಂದ ದುಃಖವಾಗಿದೆ. ಈ ನೋವಿನ ವೇಳೆಯಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಪ್ರಾರ್ಥನೆ ಮತ್ತು ಸಂತಾಪಗಳನ್ನು ಸೂಚಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ” ಎಂದು ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ರಾಜ್ಯಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಆಸ್ಕರ್ ಫರ್ನಾಂಡಿಸ್ ರವರು ಇಂದು ನಮ್ಮನ್ನೆಲ್ಲ ಅಗಲಿರುವುದು ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲೆಂದು ಕೋರುತ್ತೇನೆ. ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದರು.

”ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ.ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಕಾರ್ಯಕರ್ತರ ನಾಯಕರಾಗಿದ್ದರು. ಆಸ್ಕರ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

”ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು, ಸರಳ ಸಜ್ಜನ ನಾಯಕರಾಗಿ ಗುರುತಿಸಿಕೊಂಡಿದ್ದರು. ದೇವರು ಅವರಿಗೆ ಸದ್ಗತಿ ನೀಡಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

Related Posts

Leave a Reply

Your email address will not be published.