ಆ.23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾರಂಭಕ್ಕೆ ನಿರ್ಧಾರ : ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಆಗಸ್ಟ 23ರಿಂದ 9ರಿಂದ 12ನೇತರಗತಿ ವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು, ಮೊದಲು ಬ್ಯಾಚ್ ವೈಸ್ ತರಗತಿ ಆರಂಭಕ್ಕೆ ನಿರ್ಧರಿಸಲಾಗಿದ್ದು, ಇದನ್ನ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಇನ್ನು ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ, ಈಗಾಗಲೇ ಉನ್ನತ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ, ರಾತ್ರಿಯೇ ಹಿರಿಯ ಪೊಲೀಸ್ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿದ್ದಾರೆ. ಈಗಾಗಲೇ ಕೃತ್ಯ ಎಸಗಿದರವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೀಘ್ರದಲ್ಲೇ ಆರೋಪಿಗಳ ಬಂಧನವಾಗುತ್ತೆ ಎಂದು ಅವರು ಹೇಳಿದರು.