ಆ.27ರಂದು ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನಕ್ಕೆ ಭೂಮಿ ಪೂಜೆ
ಬಹುನಿರೀಕ್ಷಿತ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನವು ಮಂಗಳೂರಿನ ಪ್ರಶಾಂತವಾದ ಕುಳಾಯಿ ಕೋಡಿಕೆರೆ ಎಂಬಲ್ಲಿ 1.5 ಎಕರೆ ಭೂಮಿಯಲ್ಲಿ ನಿರ್ಮಾಣವಾಗಲಿದೆ. ಆಗಸ್ಟ್ 27ರಂದು ಭೂಮಿ ಪೂಜೆಯನ್ನು ನೆರವೇರಿಸಲು ತೀರ್ಮಾನಿಸಿದ್ದಾರೆ.
ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶ್ರೀ ರಾಧಾ ಗೋವಿಂದ ದೇವಸ್ಥಾನದ ನಾಮ ನಿಷ್ಠ ದಾಸ್ ಅವರು ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆಯು ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಸಂಜೀವ ಮಠಂದೂರು ಉಪಸ್ಥಿತಿಯಲ್ಲಿ ನೆರವೇರಲಿದೆ ಎಂದರು. ಇನ್ನು ಆಗಸ್ಟ್29 ಮತ್ತು 30ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯನು ಆಚರಿಸುತ್ತಿದ್ದೇವೆ. ಇನ್ನು ಸಾಂಕ್ರಾಮಿಕ ರೋಗದ ಸಂಕಷ್ಟದ ಸಮಯದಲ್ಲಿ ಪ್ರಪಂಚದ ಅತಿದೊಡ್ಡ ಆನ್‌ಲೈನ್ ಗೀತಾ ಕೋರ್ಸ್‌ನ್ನು ಯಶಸ್ವಿಯಾಗಿ ನಡೆಸಿದ್ದೇವೆ ಎಂದು ಹೇಳಿದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಶ್ರೀವಾತ್ಸ್ ದಾಸ್, ಗುರುರಾಜ್ ಉಪಸ್ಥಿತರಿದ್ದರು.