ಇಂದಿನಿಂದ ಹಾಸನಾಂಬೆ ದೇವಿ ದರ್ಶನ : 2 ಡೋಸ್ ಲಸಿಕೆ ಕಡ್ಡಾಯ
ಹಾಸನ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವ ಇಂದಿನಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಹಾಸನಾಂಬ ದೇವಾಲಯ ಆವರಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಬಹುತೇಕ ಪೂರ್ಣಗೊಂಡಿದೆ ಎಂದರು. ಸಾರ್ವಜನಿಕರಿಗೆ ಅ.29 ರಿಂದ ನ.5ರ ವರೆಗೆ ಪ್ರತಿ ದಿನ ಬೆಳಿಗ್ಗೆ 6 ರಿಂದ ರಾತ್ರಿ 8 ಗಂಟೆಯ ವರೆಗೆ ನೈವೇದ್ಯ ಸಮರ್ಪಣೆ ಹೊರತು ಪಡಿಸಿ ದರ್ಶನಕ್ಕೆ ಅವಕಾಶವಿದೆ ಆದರೆ ಕಡ್ಡಾಯವಾಗಿ ಕನಿಷ್ಠ 1 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು ಹಾಗೂ ಈ ಬಗ್ಗೆ ಮುದ್ರಿತ ಅಥವಾ ಡಿಜಿಟಲ್ ದಾಖಲೆಯನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.
ಶಿಷ್ಟಾಚಾರ ಅತಿಥಿಗಣ್ಯರ ದರ್ಶನ ವ್ಯವಸ್ಥೆಗಳಿಗೆ ಅಧಿಕಾರಿಗಳ ತಂಡ ನಿಯೋಜಿಸಲಾಗಿದ್ದು, ಅವರು ಯಾವುದೇ ಕರ್ತವ್ಯ ಲೋಪವಿಲ್ಲದಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.ಅಲ್ಲದೇ ದೇವಾಲಯದ ಬಗ್ಗೆ ಪ್ರತಿದಿನ ಪುಷ್ಪಾಲಂಕಾರ ಬದಲಾಯಿಸುವಂತೆ ಅವರು ಸೂಚಿಸಿದರು.