ಈ ಬಾರಿಯೂ ವಾರಾಂತ್ಯ ಕರ್ಫ್ಯೂ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ
ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ (ಆ. 28, 29) ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಆ. 27ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಆ.30ರ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.ಆ.28ರ ಶನಿವಾರ ಮತ್ತು ಆ.29ರ ರವಿವಾರ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ ಅಂಗಡಿ, ಮಳಿಗೆಗಳನ್ನು ತೆರೆಯಬಹುದು, ಬೀದಿ ಬದಿ ವ್ಯಾಪಾರ ಮಾಡಬಹುದು. ಹಾಗಾಗಿ ಸಾರ್ವಜನಿಕರು ಈ ಅವಧಿಯೊಳಗೆ ಅಗತ್ಯ ವಸ್ತುಗಳನ್ನು ಖರೀದಿಸಬಹುದು. ಆ ಬಳಿಕ ಅನಗತ್ಯವಾಗಿ ತಿರುಗಾಡಬಾರದು. ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ. ಆದರೆ ತುರ್ತು ಸೇವೆಗೆ ಅನುಮತಿ ನೀಡಲಾಗಿದೆ. ರೆಸ್ಟೋರೆಂಟ್, ಹೊಟೇಲ್ಗಳಲ್ಲಿ ಕೇವಲ ಪಾರ್ಸಲ್ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಮಾನ, ರೈಲು, ಬಸ್ ಸಂಚಾರಗಳಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.