ಉಚ್ಚಿಲದ ಪಣಿಯೂರಿನಲ್ಲಿ ಕಾರಿಗೆ ಕಂಟೈನರ್ ಢಿಕ್ಕಿ: ಕಾರು ಚಾಲಕ ಪಾರು

ಕಾರಿಗೆ ಕಂಟೇನರ್ ಡಿಕ್ಕಿಯಾಗಿ ಕಾರು ಜಖಂಗೊಂಡ ಘಟನೆ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಪಣಿಯೂರು ಕ್ರಾಸ್ ಬಳಿ ಸಂಭವಿಸಿದೆ.

ಉಡುಪಿ ಕಡೆಯಿಂದ ಬಂದ ಕಾರು ಉಚ್ಚಿಲ ಹೆದ್ದಾರಿ ಕ್ರಾಸ್ ಬಳಿ ಯುಟರ್ನ್ ಮಾಡುವ ವೇಳೆ ಹಿಂಬದಿಯಿಂದ ಬಂದ ಕಂಟೇನರ್ ಡಿಕ್ಕಿಯಾಗಿದೆ. ಘಟನೆಯಿಂದ ಕಾರಿನ ಹಿಂಭಾಗ ಜಖಂಗೊಂಡಿದೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

 

Related Posts

Leave a Reply

Your email address will not be published.