ಉಡುಪಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜೆಡಿಎಸ್ನಿಂದ ಪ್ರತಿಭಟನೆ
ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ಲಾಕ್ ಡೌನ್ ಘೋಷಿಸಿದ್ದರಿಂದ ಜನ ಸಾಮಾನ್ಯರು ಕೆಲಸ ಕಾರ್ಯಗಳಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಗ್ಯಾಸ್, ಪೆಟ್ರೋಲ್, ಡಿಸೇಲ್, ವಿದ್ಯುತ್ ಹಾಗೂ ನಿತ್ಯ ಉಪಯೋಗಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಜೆ.ಡಿ.ಎಸ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಯವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜನತಾದಳದ ಜಿಲ್ಲಾಧ್ಯಕ್ಷ ಯೋಗಿಸ್ ಶೆಟ್ಟಿ ಯವರು, ಅಗತ್ಯದ ವಸ್ತುಗಳ ಬೆಲೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರಿಗೆ ಬದುಕಲು ಸಾಧ್ಯವಿಲ್ಲದಂತಾಗಿದೆ. ಈ ಕೂಡಲೆ ಬೆಲೆ ಕಡಿಮೆ ಮಾಡಿ ಜನಸಾಮಾನ್ಯರು ಬದುಕಲು ಅವಕಾಶ ಮಾಡಿ ಇಲ್ಲವೇ ರಾಜಿನಾಮೆ ನೀಡಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಈ ಪ್ರತಿಭಟನೆಯಲ್ಲಿ ಅಲ್ಪ ಸಂಖ್ಯಾತರ ಅಧ್ಯಕ್ಷ ಮನ್ಸೂರ್ ಇಬ್ರಾಹಿಂ, ಕುಂದಾಪುರ ಕಾರ್ಯಾಧ್ಯಕ್ಷ ಹುಸೇನ್ ಹೈಕಾಡಿ, ಇಕ್ಬಾಲ್ ಉಡುಪಿ, ಜಯರಾಂ ಆಚಾರಿ,ಬಾಲಕ್ರಷ್ಣ , ರಮೇಶ್ ಕುಂದಾಪುರ ಹಾಗೂ ಕುಂದಾಪುರ ಮತ್ತು ಬೈಂದೂರಿನ ಜೆ.ಡಿ.ಎಸ್ ಮುಖಂಡರು ಭಾಗವಹಿಸಿದ್ದರು.
ವರದಿ: ರವಿರಾಜ್ ಕುಂದಾಪುರ