ಉಡುಪಿಯಲ್ಲಿ ಭಾರೀ ಮಳೆ: ನೀರಲ್ಲಿ ಮುಳುಗಿದ ಹತ್ತಾರು ಬೈಕ್, ಕಾರುಗಳು
ಉಡುಪಿಯಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆ ಸುರಿಯುತ್ತಿದ್ದು ಬಿಗ್ ಬಜಾರ್ ಪಾರ್ಕಿಂಗ್ ಪ್ರದೇಶಕ್ಕೆ ಮಳೆ ನೀರು ನುಗ್ಗಿದೆ. ಮಳೆ ನೀರಲ್ಲಿ ಹತ್ತಾರು ಬೈಕ್ ಕಾರುಗಳು ಮುಳುಗಿದ ಘಟನೆ ನಡೆದಿದೆ.
ನಿನ್ನೆ ತಡರಾತ್ರಿಯಿಂದ ಉಡುಪಿ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಬಿಗ್ ಬಜಾರ್ ಕಟ್ಟಡದ ಪಾರ್ಕಿಂಗ್ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಕಟ್ಟಡದ ನೆಲ ಮಳಿಗೆಗೆ ಮಳೆ ನೀರು ತುಂಬಿ ಕೊಂಡ ಪರಿಣಾಮ ಪಾರ್ಕಿಂಗ್ ಮಾಡಲಾಗಿದ್ದ,ಆರು ಕಾರುಗಳು ಹಾಗೂ ಹತ್ತಕ್ಕೂ ಹೆಚ್ಚು ಬೈಕುಗಳು ಮುಳುಗಿ ಹೊಗಿವೆ. ಅಗ್ನಿ ಶಾಮಕ ಸಿಬ್ಬಂದಿಗಳು ಬೆಳಗ್ಗಿನಿಂದಲೇ ಪಂಪ್ ಗಳ ಮೂಲಕ ನೀರು ಮೇಲಕತ್ತುವ ಕಾರ್ಯಚರಣೆಯಲ್ಲಿ ತೊಡಗಿಕೊಂಡಿದ್ದಾರೆ.