ಉಡುಪಿಯಲ್ಲಿ ಮಗು ಅಪಹರಣ ಪ್ರಕರಣ: ಆರೋಪಿಯ ಬಂಧನ

ಉಡುಪಿಯ ಕರಾವಳಿ ಬೈಪಾಸ್ ಬಳಿ ಶಿವರಾಜ್ ಎನ್ನುವ ಎರಡುವರೆ ವರುಷದ ಮಗುವೊಂದನ್ನ ಅಪಹರಣ ಮಾಡಲಾಗಿತ್ತು.ಕಾರವಳಿ ಬೈಪಾಸ್ ಬಳಿಯ ಭಾರತಿ ಮತ್ತು ಅರುಣ್ ಎನ್ನುವವರ ಮಗುವನ್ನು ಪರಿಚಯದ ವ್ಯಕ್ತಿಯೇ ಅಪಹರಿಸಿದ್ದ. ಮಗುವಿಗೆ ಚಾಹಾ ಕುಡಿಸ್ತೇನೆ ಎಂದು ಕರೆದುಕೊಂಡು ಹೋಗಿದ್ದ ಬಾಗಲಕೋಟೆ ಮೂಲದ ಪರುಶರಾಮ ಎನ್ನುವ ವ್ಯಕ್ತಿ ವಾಪಸ್ಸು ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡ ನಗರ ಠಾಣಾ ಪೊಲೀಸರು ಕಾರ್ಯ ಪೃವತ್ತರಾಗಿ ನಗರದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ ಮಗು ಅಪಹರ ನಡೆಸಿರುವ ದೃಶ್ಯ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳನ್ನು ಅಧಾರಿಸಿ ಪೊಲೀಸರು ನಗರದ ಬಸ್ ನಿಲ್ದಾಣ ,ರೈಲ್ವೇ ನಿಲ್ದಾಣಗಳಲ್ಲಿ ತಪಾಸಣೆ ನಡೆಸಿದ್ದರು.ಉಡುಪಿಯ ಸಂತಕಟ್ಟೆ ಬಸ್ ನಿಲ್ದಾಣನದಿಂದ ಇಳಿದು ಬೇರೊಂದು ಬಸ್ ಮೂಲಕ ಕುಮಟಾ ಭಾಗಕ್ಕೆ ತೆರಳಿರುವ ಬಗ್ಗೆ ಮಾಹಿತಿ ಅಧಾರಿಸಿ ಕುಮಟಾ ಪೊಲೀಸರಿಗೆ ಮಾಹಿತಿ ನೀಡಿದ್ದು ,ಕುಮಾಟಾ ಪೊಲೀಸರು ಮಗುವಿನೊಂದಿಗಿಂದ ಅರೋಪಿಯನ್ನು ಬಂಧಿಸಿದ್ದಾರೆ.ಅರೋಪಿ ಸದ್ಯ ಪೊಲೀಸರ ವಶದಲ್ಲಿದ್ದು ತನಿಖೆ ನಡೆಯುತ್ತಿದೆ.ಸದ್ಯ ಮಗು ಶಿವರಾಜ್ ಪೋಷಕರ ಕೈ ಸೇರಿದೆ.

Related Posts

Leave a Reply

Your email address will not be published.