ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ
ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ಭಯೋತ್ಪಾದಕ ಸಂಘಟನೆಗಳ ವಿರುದ್ದ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ಬಳಿಕ ನೀಡಿದ ಮನವಿಯಲ್ಲಿ ಹಿಂದೂ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ನಡೆಸಿ ಭಯೋತ್ಪಾದಕ ಚಟುವಟಿಕೆಗೆ ಬಳಸುತ್ತಿದ್ದಾರೆ. ಆದರೆ ಮುಸಲ್ಮಾನರ ಮದುವೆಯಾದ ಹಿಂದೂ ಹೆಣ್ಣು ಮಕ್ಕಳ ಸದ್ಯದ ಸ್ಥಿತಿಗೆ ಹೇಗಿದೆ ಎಂದು ತನಿಖೆ ಮಾಡಬೇಕು. ಭಯೋತ್ಪಾದಕ ಚಟುವಟಿಕೆಗೆ ಹಣ ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಹಚ್ಚಬೇಕು. ಮಂಗಳೂರಿನಲ್ಲಿ ಎನ್. ಐ.ಎ ಕಚೇರಿ ತೆರಬೇಕು ಎಂದು ಪ್ರತಿಭಟನಾಕಾರರು ಅಗ್ರಹಿಸಿದರು. ಬಳಿಕ ಅಪಾರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು.