ಉಡುಪಿಯ ಮಲಬಾರ್ ಗೋಲ್ಡ್& ಡೈಮಂಡ್ಸ್ ಸಂಸ್ಥೆಗೆ ಜೆಡಿಎಸ್‌ನಿಂದ ಅಭಿನಂದನಾ ಪತ್ರ
ಉಡುಪಿಯ ಮಲಬಾರ್ ಗೋಲ್ಡ್ & ಡೈಮಂಡ್ಸ್, ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ರೇಷನ್ ಕಿಟ್, ಔಷಧ ವಿತರಣೆ ಮಾಡಿ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಅವರ ಮಹಾನ್ ಕಾರ್ಯವನ್ನು ಪರಿಗಣಿಸಿ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಿದೆ.
ಲಾಕ್‌ಡೌನ್ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸುಮಾರು ೫ ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ರೇಷನ್ ಕಿಟ್ ನೀಡಿರುವುದಲ್ಲದೆ ಪ್ರತೀ ತಿಂಗಳು ಅರ್ಹ ಬಡವರಿಗೆ ಔಷಧ ವಿತರಣೆ, ಪ್ರತೀ ವರ್ಷ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ , ಬಡ ಹೆಣ್ಣು ಮಕ್ಕಳ ಮದುವೆಗೆ ಸಹಾಯ ಧನ ಹಾಗೂ ಮನೆ ನಿರ್ಮಾಣಕ್ಕೆ ಸಹಾಯ ನೀಡುತ್ತಾ ಬಂದಿರುವುದು ಅತ್ಯಂತ ಪ್ರಶಂಸನೀಯವಾಗಿದೆ. ಈ ಮಹಾನ್ ಕಾರ್ಯಕ್ಕೆ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಿದ್ದಾರೆ.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಕಾಪು ಅವರು ಮಲಬಾರ್ ಗೋಲ್ಡ್ ಡೈಮಂಡ್ ಅಭಿನಂದನಾ ಪತ್ರ ನೀಡಿ ಅಭಿನಂದಿಸಿದರು.ಈ ವೇಳೆ ಮಲಬಾರ್ ಗೋಲ್ಡ್ ಡೈಮಂಡ್ಸ್‌ನ ಮ್ಯಾನೇಜರ್ ರಾಘವೇಂದ್ರ ನಾಯಕ್, ಗುರುರಾಜ್ ಕುಲಾಲ್, ಸಂದೀಪ್ ಸಾಪಲ್ಯ, ಸಿಬ್ಬಂದಿ ವರ್ಗದವರು ಹಾಗೂ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.