ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ವರ್ಗಾವಣೆ
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.