ಉದ್ಯಾವರ: ರಸ್ತೆ ವಿಭಾಜಕಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಗೂಡ್ಸ್ ಟೆಂಪೋ
ರಸ್ತೆ ವಿಭಾಜಕಕ್ಕೆ ಗೂಡ್ಸ್ ಟೆಂಪೋವೊಂದು ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ. ಅಪಘಾತದಲ್ಲಿ ಟೆಂಪೋ ಚಾಲಕನ ಕೈ ಮೂಳೆ ಮುರಿತಕ್ಕೊಳಗಾಗಿದೆ.
ಮಂಗಳೂರು ಕಡೆಯಿಂದ ಬಂದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿಯಾಗಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಿದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಕಾಪು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ತೆರವುಗೊಳಿಸಿದರು.