ಉರ್ವ ಮಾರುಕಟ್ಟೆ ಸಂಕೀರ್ಣ : ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ
ಮಂಗಳೂರು ಮಹಾನಗರ ಪಾಲಿಕೆಯ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದಅಕ್ಷಯ್ ಶ್ರೀಧರ್ , ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಗಣೇಶ್ ಕುಲಾಲ್, ಸಂಧ್ಯಾ ಮೋಹನ್ ಆಚಾರ್, ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಸಂಬಂಧಪಟ್ಟ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.