ಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿತ

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಉಳ್ಳಾಲದಲ್ಲಿ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ.

ಉಳ್ಳಾಲದಲ್ಲಿ ಗ್ಯಾಸ್ ಸ್ಟವ್‌ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ ಚೂರಿ ಇರಿತಕ್ಕೊಳಗಾಗಿರುವವರು. ಆರೋಪಿಯು ಈ ಹಿಂದೆ ಹರೀಶ್ ಜೊತೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ಗಲಾಟೆ ಮಾಡಿದ್ದನೆನ್ನಲಾಗಿದೆ. ಈ ಬಗ್ಗೆ ಹರೀಶ್ ಗಾಣಿಗ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಆರೋಪಿ ಮಂಗಳವಾರ ಹರೀಶ್ ರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದನು. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

Related Posts

Leave a Reply

Your email address will not be published.